Vijayanagara Express

Kannada News Portal

ಪದವಿ ಪೂರ್ವ ಕಾಲೇಜ್ ಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟನೆ ಕಾರ್ಯಕ್ರಮಕ್ಕೆ ಡಿಡಿಪಿಐ ಗೈರು.

1 min read

ಪದವಿ ಪೂರ್ವ ಕಾಲೇಜ್ ಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟನೆ ಕಾರ್ಯಕ್ರಮಕ್ಕೆ ಡಿಡಿಪಿಐ ಗೈರು.
ಹರಪನಹಳ್ಳಿ ಪಟ್ಟಣದ ಭಂಗಿ ಬಸಪ್ಪ ಪಿಯುಸಿ ವಿಜ್ಞಾನ ಕಾಲೇಜಿನಲ್ಲಿ ಸೋಮವಾರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಲಾಯಿತು.
ಕ್ರೀಡಾಕೂಟವನ್ನು ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷರಾದ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮಠದ ಆಡಳಿತಾಧಿಕಾರಿ ಟಿ.ಎಂ.ಚಂದ್ರಶೇಖರಯ್ಯ ಧ್ವಜಾರೋಹಣ ನೆರವೇರಿಸಿದರು. ವೈದ್ಯ ಮಹೇಶ್, ಪ್ರಾಚಾರ್ಯರಾದ ಅರುಣಕುಮಾರ್, ದುರುಗಪ್ಪ, ತೊಪ್ಪಲ ಹಾಲೇಶ್, ಹಿರೇಮಠ್, ಪ್ರಸನ್ನಕುಮಾರ್, ದುರುಗಪ್ಪ, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮ ಉದ್ಘಾಟಿಸಬೇಕಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ರಾಜು ಗೈರು ಹಾಜರಾಗಿದ್ದರು.
ಈ ಸಂದರ್ಭದಲ್ಲಿ ತೆಗ್ಗಿನಮಠದ ಮಠದ ಆಡಳಿತಾಧಿಕಾರಿ ಟಿ.ಎಂ.ಚಂದ್ರಶೇಖರಯ್ಯ ಮಾತನಾಡಿ, ಕ್ರೀಡೆಯಿಂದ ದೇಹ ಮತ್ತು ಮನಸ್ಸು ಗಟ್ಟಿಯಾಗುತ್ತದೆ. ಅದ್ದರಿಂದ ವಿದ್ಯಾರ್ಥಿಗಳು ಕ್ರೀಡೆಗೆ ಒಲವು ತೋರಬೇಕು. ಒಲಪಿಂಕ್ ಕ್ರೀಡೆಯಲ್ಲಿ ಭಾರತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗೆಲುವು ಪಡೆಯುತ್ತಿಲ್ಲ. ಸರ್ಕಾರ ಗಮನಹರಿಸಿ ಕ್ರೀಡೆಗೆ ಹೆಚ್ಚಿನ ಅದ್ಯತೆ ನೀಡಬೇಕು ಎಂದರು.
ತೆಗಿನಮಠ ಸಂಸ್ಥಾನದ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಕ್ರೀಡೆಗೆ ಹೆಚ್ಚಿನ ಒತ್ತು ಕೊಡಬೇಕು. ಸಾಮಾಜಿಕ ಜಾಲತಾಣದ ಮೊರೆ ಹೋಗಿ ವಿದ್ಯಾರ್ಥಿಗಳು ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ಕಂಡು ಬರುತ್ತದೆ. ಆದ್ದರಿಂದ ಪಾಠದ ಜೊತೆಗೆ ಆಟಕ್ಕೂ ಹೆಚ್ಚಿನ ಆದ್ಯತೆ ನೀಡಿ ಎಂದು ಸಲಹೆ ನೀಡಿದರು.

Leave a Reply

Your email address will not be published. Required fields are marked *