Vijayanagara Express

Kannada News Portal

ಸ್ವಾರ್ಥಕ್ಕಾಗಿ ಬಳ್ಳಾರಿ ಜಿಲ್ಲೆ ವಿಭಜನೆ :ಬಿಜೆಪಿ,ಕಾಂಗ್ರೆಸ್, ಅಭ್ಯರ್ಥಿಗಳಿಗೆ ಮತ ಹಾಕದಂತೆ ಪಕ್ಷೇತರ ಅಭ್ಯರ್ಥಿ ಗಂಗಿರೆಡ್ಡಿ ಮನವಿ.

1 min read

ಸ್ವಾರ್ಥಕ್ಕಾಗಿ ಬಳ್ಳಾರಿ ಜಿಲ್ಲೆ ವಿಭಜನೆ: ಬಿಜೆಪಿ, ಕಾಂಗ್ರೆಸ್ಅ ಭ್ಯರ್ಥಿಗಳಿಗೆ ಮತಹಾಕದಂತೆ ಪಕ್ಷೇತರ ಅಭ್ಯರ್ಥಿ ಗಂಗಿ ರೆಡ್ಡಿ ಮನವಿ.

ಹರಪನಹಳ್ಳಿ: ರಾಜಕಾರಣಿಗಳ ಸ್ವಾರ್ಥಕ್ಕಾಗಿ ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿ ವಿಜಯನಗರ ಜಿಲ್ಲೆ ರಚಿಸಿದ್ದಾರೆ ಎಂದು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಬಳ್ಳಾರಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್.ಗಂಗಿರೆಡ್ಡಿ ಆರೋಪಿಸಿದರು.
ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಮತಯಾಚನೆ ಮಾಡಿದ ನಂತರ ಹರಪನಹಳ್ಳಿ ಪಟ್ಟಣದ ಖಾಸಗಿ ಹೋಟಲ್ಲೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸ್ವಾರ್ಥಕ್ಕಾಗಿ ಜಿಲ್ಲೆ ವಿಭಜಿಸಿರುವುದಲ್ಲದೇ ಜಿಲ್ಲೆ ರಚನೆ ಮಾಡಿರುವುದಕ್ಕಾಗಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಕೂಡ ಬಡ ಜನರನ್ನು ಶೋಷಣೆ ಮಾಡಿವೆ, ಕೇವಲ ಮತಕ್ಕಾಗಿ ಜನರನ್ನು ಬಳಸಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದ ನಂತರ ನಿರ್ಲಕ್ಷ್ಯ ಮಾಡುತ್ತಾರೆ. ಅದ್ದರಿಂದ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾದ ನನಗೆ ಮತ ನೀಡಬೇಕು ಎಂದು ಮನವಿ ಮಾಡಿದರು.
ಬಳ್ಳಾರಿ ನಗರಸಭೆ ಸದಸ್ಯನಾಗಿ, ಜನತಾಪಾರ್ಟಿ ಜಿಲ್ಲಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದೇನೆ. ಕಳೆದ ಮೂರು ಚುನಾವಣೆಯಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತಾ ಬಂದಿದ್ದೇನೆ. ನನಗೆ ಮತ ನೀಡಿ ಗೆಲ್ಲಿಸಿದಲ್ಲಿ ಬಳ್ಳಾರಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸುತ್ತೇನೆ. ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಗಳ ಮೂಲಭೂತ ಸೌಕರ್ಯಗಳಿಗೆ ಅದ್ಯತೆ ನೀಡುವುದಾಗಿ ಅವರು ಭರವಸೆ ನೀಡಿದರು.
ರೈತರಿಗೆ ರಸಗೊಬ್ಬರ ಕ್ರಿಮಿನಾಶಕಗಳು ರಿಯಾಯಿತಿ ದರದಲ್ಲಿ ನೀಡುವಂತೆ ಮತ್ತು ರೈತರು ಬೆಳೆದಿದ್ದ ಫಸಲಿಗೆ ಬೆಂಬಲ ದರವನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಹೋರಾಟ ನಡೆಸುತ್ತೇನೆ ಎಂದರು.

Leave a Reply

Your email address will not be published. Required fields are marked *