ಕಾರ್ಯಕರ್ತರೊಂದಿಗೆ ಸೇರಿ ಮನೆ ಮನೆಗೆ ತೆರಳಿ ಪಕ್ಷವನ್ನು ಕಟ್ಟುತ್ತೇನೆ -ಎಂ. ಪಿ. ಲತಾಮಲ್ಲಿಕಾರ್ಜುನ್.
1 min read
‘ಸ್ವಯಂ ಪ್ರೇರಿರತರಾಗಿ ಕಾಂಗ್ರೆಸ್ ಪಕ್ಷ ಸದಸ್ಯತ್ವ ಪಡೆಯುತ್ತಿರುವ ಜನರು’
ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷವನ್ನ ಕಾರ್ಯಕರ್ತರೊಂದಿಗೆ ಸೇರಿ ಕಟ್ಟುತ್ತೇವೆ: ಎಂ.ಪಿ.ಲತಾ ಮಲ್ಲಿಕಾರ್ಜುನ್
ಹರಪನಹಳ್ಳಿ: ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಜನರು ಬೇಸತ್ತು ಸ್ವಯಂ ಪ್ರೇರಿರತರಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ತಿಳಿಸಿದರು.
ಹರಪನಹಳ್ಳಿ ಪಟ್ಟಣದ ಕಾಶಿಸಂಗಮೇಶ್ವರ ಬಡಾವಣೆಯ ಗಣೇಶ ಪಾರ್ವತಿ ದೇವಸ್ಥಾನ ಶನಿವಾರ ಮಹಿಳಾ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಘಟಕದವತಿಯಿಂದ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಪಿಸಿಸಿವತಿಯಿಂದ ರಾಜ್ಯದ್ಯಂತ ಏಕ ಕಾಲದಲ್ಲಿ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಸದೃಢವಾಗಲುಸಂಘಟನೆ ಮಾಡುತ್ತಿದ್ದು, ಇಂದಿನ ಸದಸ್ಯತ್ವ ಅಭಿಯಾನಕ್ಕೆ ಸಿಕ್ಕ ಬೆಂಬಲವೇ ಸಾಕ್ಷಿ ಎಂದರು.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೇರಿದಂತೆ ಪಕ್ಷದ ಮುಖಂಡರ ನೇತೃತ್ವದಲ್ಲಿ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿದೆ. ಇದು ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಸದಸ್ಯತ್ವ ಅಭಿಯಾನ ಮುಂದುವರೆಯಲಿದ್ದು ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷವನ್ನ ಕಾರ್ಯಕರ್ತರೊಂದಿಗೆ ಸೇರಿ ಕಟ್ಟುತ್ತೇವೆ. ಸದಸ್ಯತ್ವ ಅಭಿಯಾನ ಒಂದು ಇತಿಹಾಸ ಸೃಷ್ಟಿಸಲಿದೆ. ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಜನರು ಬೇಸತ್ತಿದ್ದು, ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ. ನಾವು ಯಾರಿಗೂ ಸಹ ಒತ್ತಡ ಹಾಕುತ್ತಿಲ್ಲ ಜನರೇ ನಮ್ಮ ಪಕ್ಷದತ್ತ ಹೆಚ್ಚು ಒಲವು ತೋರಿಸುತ್ತಿದ್ದಾರೆ ಎಂದರು.
ಪುರಸಭೆ ಸದಸ್ಯರಾದ ಎಂ.ವಿ.ಅಂಜಿನಪ್ಪ, ಗಣೇಶ್, ಸತ್ತೂರು ಯಲ್ಲಮ್ಮ, ಮುಖಂಡರಾದ ಗುಡಿನಾಗರಾಜ್, ಗಿರೀಶ್, ತಿಮ್ಮಲಾಪುರ ಈಶ್ವರ್, ಕಡಬಗೆರೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಅನುಷಾ ಮಂಜುನಾಥ, ಜಯಲಕ್ಷ್ಮಿ , ನಂದಿಬೇವೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಲಕ್ಷ್ಮಿ ಚಂದ್ರಶೇಖರ್, ಯುವ ಕಾಂಗ್ರೆಸ್ ಹರಪನಹಳ್ಳಿ ಬ್ಲಾಕ್ ಅಧ್ಯಕ್ಷ ಮತ್ತೂರು ಬಸವರಾಜ್, ಚಿಗಟೇರಿ ಬ್ಲಾಕ್ ಅಧ್ಯಕ್ಷ ಹೆಚ್.ಶಿವರಾಜ್, ರವಿ ಯುವ ಶಕ್ತಿ ಪಡೆ ಅಧ್ಯಕ್ಷ ಉದಯಶಂಕರ್ ಮತ್ತಿತರರು ಉಪಸ್ಥಿತರಿದ್ದರು.