Vijayanagara Express

Kannada News Portal

ಪಂಚರಾಜ್ಯ ಚುನಾವಣೆ ಫಲಿತಾಂಶ ಬಿಜೆಪಿಗೆ ಭರ್ಜರಿ ಗೆಲುವು ಕಾರ್ಯಕರ್ತರಿಂದ ಸಿಹಿ ಹಂಚಿ ಸಂಭ್ರಮಾಚರಣೆ

1 min read

ಪಂಚರಾಜ್ಯ ಚುನಾವಣೆ ಫಲಿತಾಂಶ ಬಿಜೆಪಿಗೆ ಭರ್ಜರಿ ಗೆಲುವು
ಕಾರ್ಯಕರ್ತರಿಂದ ಸಿಹಿ ಹಂಚಿ ಸಂಭ್ರಮಾಚರಣೆ

ಹರಪನಹಳ್ಳಿ: ಗುರುವಾರ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಬಿಜೆಪಿಗೆ ಭರ್ಜರಿ ಗೆಲುವು ದೊರೆತ ಕಾರಣ ಸಿಹಿ ಹಂಚಿ ಸಂಭ್ರಮಾಚರಣೆ ಆಚರಿಸಿದರು .

ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ಸುತ್ತೂರು ಹಾಲೇಶ್ ಮಾತನಾಡಿ ಪಂಚರಾಜ್ಯ ಚುನಾವಣೆಗಳಲ್ಲಿ ನಡೆದ ಚುನಾವಣಾ ಫಲಿತಾಂಶವು ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರವನ್ನು ಹಿಡಿಯಲಿದೆ ಪಂಜಾಬ್ ನಲ್ಲಿ ಎರಡು ಸ್ಥಾನಗಳನ್ನು ಗೆಲ್ಲುವ ಮೂಲಕ ಖಾತೆಯನ್ನು ತೆರೆದಿದ್ದೇವೆ ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ ರವರು ಮಾಡಿದ ಉತ್ತಮ ಕೆಲಸಗಳಿಂದಾಗಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಿದ್ದಾರೆ ನರೇಂದ್ರ ಮೋದಿಯವರು ಭಾರತದಲ್ಲಿ ಮಾಡಿದ ಕಾರ್ಯಗಳಿಂದ ಬಿಜೆಪಿಯು ಈ ಮಟ್ಟದಲ್ಲಿ ಗೆಲ್ಲುತ್ತಿದೆ 2024 ರಲ್ಲಿ ನಡೆಯುವ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಹುದ್ದೆಗೆ ಏರಲಿದ್ದಾರೆ ಎಂದರು.

ಯುಕ್ರೇನ್ ಯುದ್ಧಭೂಮಿಯಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಆಪರೇಷನ್ ಗಂಗಾ ಎಂಬ ಹೆಸರಿನಲ್ಲಿ 20 ಸಾವಿರ ವಿದ್ಯಾರ್ಥಿಗಳನ್ನು ಏರ್ ಲಿಫ್ಟ್ ಮಾಡುವ ಮೂಲಕ ಪ್ರಪಂಚದ ಇತರ ದೇಶಗಳು ತಮ್ಮ ತಮ್ಮಜನರನ್ನು ರಕ್ಷಿಸಿ ವಾಪಾಸ್ ಕರೆತಂದದ್ದಕ್ಕಿಂತ ಉತ್ತಮ ರೀತಿಯಲ್ಲಿ ಕೇಂದ್ರ ಸರ್ಕಾರ ಭಾರತೀಯರನ್ನು ರಕ್ಷಿಸಿದ್ದು ನರೇಂದ್ರ ಮೋದಿ ಅವರ ಶಕ್ತಿಯನ್ನು ತಾಕತ್ತನ್ನು ತೋರಿಸುತ್ತದೆ ಎಂದರು. ಮುಂಬರುವ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಹ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು .

ಈ ಸಂದರ್ಭದಲ್ಲಿ ಬಿಜೆಪಿ ಎಷ್ಟಿ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಆರ್ ಲೋಕೇಶ್, ಎಂಪಿ ನಾಯ್ಕ, ಚಿಗಟೇರಿ ಉದಯಶಂಕರ್ , ನೀಲಗುಂದದ ಮನೋಜ್ ವಕೀಲರು, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಮಂಜಾನಾಯ್ಕ್ ,ನಿಂಬೆನಾಯ್ಕ್ ಕಣಿವಿಹಳ್ಳಿ ಮಂಜುನಾಥ್, ಬಿ ವೆಂಕಟೇಶ್ ನಾಯ್ಕ, ನಿಟ್ಟೂರು ಸಣ್ಣಹಾಲಪ್ಪ,ಮ್ಯಾಕಿ ದುರುಗಪ್ಪ, ಲಿಂಗರಾಜ್ ಶೃಂಗಾರ ತೋಟ,ಮಾಚಿಹಳ್ಳಿಮಲ್ಲೇಶ್, ಕೊಟ್ರೇಶ್, ರೇಖಮ್ಮ, ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *