Vijayanagara Express

Kannada News Portal

ಕರುಣಾಕರ ರೆಡ್ಡಿ ಅಭಿವೃದ್ಧಿವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ -ಅಂಬಾಡಿ ನಾಗರಾಜ್.

 

ಹರಪನಹಳ್ಳಿ: ಕರುಣಾಕರ ರೆಡ್ಡಿ ಅಭಿವೃದ್ಧಿವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕಾಂಗ್ರೆಸ್ ನ ಓಬಿಸಿ ಘಟಕದ ರಾಜ್ಯ ಉಪಾಧ್ಯಕ್ಷ ಅಂಬಾಡಿ ನಾಗರಾಜ್ ಹೇಳಿದರು.

ಹರಪನಹಳ್ಳಿ ಪಟ್ಟಣಕ್ಕೆ ಹೊಂದಿಕೊಂಡಿರುವ ದೇವರತಿಮ್ಮಲಾಪುರದ ಶ್ರೀಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ದಲ್ಲಿ ಸಭೆ ಉದ್ದೇಶಿಸಿ ಮಾತನಾಡಿದ ಅವರು ಹರಪನಹಳ್ಳಿ ತಾಲ್ಲೂಕು ಅಭಿವೃದ್ಧಿ ಯಿಂದ ಹಿಂದೆ ಬಿದ್ದಿದೆ ಎಂದು ವಾಗ್ಧಾಳಿ ನಡೆಸಿದ ಅವರು ತಾಲೂಕಿಗೆ ಮಾಜಿ ಶಾಸಕ ದಿವಂಗತ ಎಂ. ಪಿ ರವೀಂದ್ರ ರವರು 371ಜೆ ವಿಧಿಯ ಸೌಲಭ್ಯವನ್ನು ತಂದುಕೊಟ್ಟಿದ್ದಾರೆ 60 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಆರಂಭದಲ್ಲಿ ತ್ವರಿತ ಗತಿಯಲ್ಲಿ ಸಾಗಿದ ಕಾಮಗಾರಿ ಕರುಣಾಕರ ರೆಡ್ಡಿ ಅವರ ನಿರ್ಲಕ್ಷ್ಯ ಧೋರಣೆ ಮತ್ತು ವಿಳಂಬ ನೀತಿ ಯಿಂದಾಗಿ ಕ್ಷೇತ್ರದ ಜನರು ನೀರಾವರಿ ಯೋಜನೆ ಯಿಂದ ವಂಚಿತರಾಗುತ್ತಿದ್ದಾರೆ ಇದಕ್ಕೆ ಪ್ರಮುಖ ಕಾರಣ ಶಾಸಕ ಕರುಣಾಕರ ರೆಡ್ಡಿ ಅವರ ನಿರ್ಲಕ್ಷ್ಯ ವಾಗಿದೆ ಎಂದ ಅವರು ,ಗರ್ಭಗುಡಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ ಎಂದು ಹರಪನಹಳ್ಳಿ ಶಾಸಕ ಕರುಣಾಕರ ರೆಡ್ಡಿ ಅವರನ್ನು ಟೀಕಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು ಜನಸಾಮಾನ್ಯರಿಗೆ ಬೆಲೆ ಏರಿಕೆಯಿಂದಾಗಿ ಉಂಟಾಗಿರುವ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ ಅಡುಗೆ ಅನಿಲ, ಪೆಟ್ರೋಲ್,ಡೀಸೆಲ್, ಅಡುಗೆ ಎಣ್ಣೆ, ಮುಂತಾದ ವಸ್ತುಗಳ ಬೆಲೆಗಳು ಗಗನಕ್ಕೆ ಏರಿವೆ ಎಂದರು.
ನಮ್ಮ ಸರ್ಕಾರ ಬಂದರೆ ಹರಪನಹಳ್ಳಿ ತಾಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆ ಜಾರಿಗೊಳಿಸುತ್ತೇವೆ ಎಂದರು.
ಮುಂದಿನ ಬಾರಿ ರಾಜ್ಯದಲ್ಲಿ ನಾವೇ ಆಡಳಿತ ಹಿಡಿಯುತ್ತೇವೆ
ಹರಪನಹಳ್ಳಿ ಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ ಆದಾಗ್ಯೂ ನಾವು ಆಂತರಿಕ ಭಿನ್ನಾಭಿಪ್ರಾಯವನ್ನು ಮರೆತು ಎಲ್ಲರೂ ಒಂದಾಗಿ ಚುನಾವಣೆ ಎದುರಿಸುತ್ತೇವೆ ಗೆಲುವು ಸಾಧಿಸುತ್ತೇವೆ ಎಂದು ಹೇಳಿದರು.

 

ಈ ಸಂದರ್ಭದಲ್ಲಿ ಸಂಡೂರು ತಾಲೂಕಿನ ಶಾಸಕ ತುಕರಾಮ್, ಬಳ್ಳಾರಿ ಜಿಲ್ಲೆಯ ಸಂಸದ ವೈ ದೆವೇಂದ್ರಪ್ಪನವರ ಪುತ್ರರಾದ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಅರಸಿಕೇರಿ ವೈ.ಡಿ.ಅಣ್ಣಪ್ಪ, ಎಂ ಪಿ ವೀಣಾ ಮಹಾಂತೇಶ್, ಎಂ ಬಿ ಯಶವಂತ್ ಗೌಡ, ಕೆಪಿಸಿಸಿ ವಕ್ತಾರರಾದ ಕವಿತಾ ರೆಡ್ಡಿ , ನೀಲಗುಂದದ ಗುಡ್ಡದ ವಿರಕ್ತಮಠದ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.

Leave a Reply

Your email address will not be published. Required fields are marked *