Vijayanagara Express

Kannada News Portal

ಶೈಕ್ಷಣಿಕ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ ಸಹಕಾರಿಯಾಗಲಿದೆ – ಕ್ಷೇತ್ರ ಶಿಕ್ಷಣಾಧಿಕಾರಿ ಯು ಬಸವರಾಜ್

1 min read

 

ಶೈಕ್ಷಣಿಕ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ ಸಹಕಾರಿಯಾಗಲಿದೆ – ಕ್ಷೇತ್ರ ಶಿಕ್ಷಣಾಧಿಕಾರಿ ಯು ಬಸವರಾಜ್

 

ಹರಪನಹಳ್ಳಿ: ಶೈಕ್ಷಣಿಕ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ ಸಹಕಾರಿಯಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯು ಬಸವರಾಜ್ ರವರು ಹೇಳಿದರು.

ತಾಲೂಕಿನ ಕನ್ನಾಯಕನಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕನ್ನಾಯಕನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ 2022-23, ನೇ ಸಾಲಿನ ಗೌರಿಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಕನ್ನಾಯಕನಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಸಯಿತು.

ಪ್ರತಿಭಾ ಕಾರಂಜಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಇಂತಹ ಪ್ರತಿಭಾ ಕಾರಂಜಿಗಳು ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಲು ಅನುಕೂಲ ವಾಗುತ್ತದೆ, ಆರಂಭದಲ್ಲಿ ಇವರಿಗೆ ಪ್ರೋತ್ಸಾಹವನ್ನು ನೀಡಿದರೆ ಮುಂದೆ ಉನ್ನತವಾದಂತಹ ಸಾಧನೆಯನ್ನು ಮಾಡಲು ಸಾಧ್ಯವಾಗುತ್ತದೆ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ಇಂತಹ ಕಾರ್ಯಕ್ರಮಗಳಲ್ಲಿ ಅವರನ್ನು ಪ್ರೋತ್ಸಾಹಿಸಿದರೆ ಅಥವಾ ಅವರಿಗೆ ಅವಕಾಶಗಳನ್ನು ನೀಡಿದರೆ ಉನ್ನತವಾದ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು .

ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಪಟ್ಟೇತರ ಕ್ರೀಡೆ ಸಾಂಸ್ಕೃತಿಕ ಹಾಗೂ ಪ್ರತಿಭಾ ಕಾರಂಜಿಗಳಂತಹ ಚಟುವಟಿಕೆಗಳಿಂದ ನೈಜ ಪ್ರತಿಭೆಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಕೊರಚ ಸಮಾಜದ ಮುಖಂಡ ಅಶೋಕ್ ಮಾತನಾಡಿ ವಿದ್ಯಾರ್ಥಿಗಳ ಜೀವನದಲ್ಲಿ ಸ್ಪರ್ಧೆಗಳು ಆರೋಗ್ಯಕರವಾಗಿರಬೇಕು ಸೋಲು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಿ ಸ್ಪರ್ಧಾಮನೋಭಾವವನ್ನು ಮೈಗೂಡಿಸಿಕೊಂಡು ಉಜ್ವಲ ಭವಿಷ್ಯವನ್ನು ರೂಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ವೇಳೆ ಹುಲಿಕಟ್ಟಿ ಚಂದ್ರಪ್ಪ ಬಾಷು ಸಾಹೇಬ್ ಬಸವರಾಜ್ ಸಂಗಪ್ಪನವರ ಮಾತನಾಡಿದರು.

ಗೌರಿಹಳ್ಳಿ ಕ್ಲಸ್ಟರ್ ವಿಭಾಗದ 1ನೇ ತರಗತಿಯಿಂದ 10ನೇ ತರಗತಿಯ ವರೆಗಿನ ಶಾಲಾ ಮಕ್ಕಳಿಗೆ ಪ್ರತಿಭಾ ಕಾರಂಜಿಯ ಕಾರ್ಯಕ್ರಮವನ್ನು ಕನ್ನಾಯಕನಹಳ್ಳಿಯಲ್ಲಿ ಆಯೋಜಿಸಲಾಗಿದೆ ಇಲ್ಲಿ ಒಟ್ಟು 17 ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ 10 ಕಿರಿಯ ಪ್ರಾಥಮಿಕ ಶಾಲೆ, 7 ಹಿರಿಯ ಪ್ರಾಥಮಿಕ ಶಾಲೆ, ಹಾಗೂ 3 ಪ್ರೌಢಶಾಲೆಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಚದ್ಮಾವೇಷ ,ಏಕಾಭಿನಯ ಪಾತ್ರ ,ಭಾವಗೀತೆ ,ಚಿತ್ರಗೀತೆ ,ಜಾನಪದ ಗೀತೆ ,ಕ್ಲೇ ಮಾಡ್ಲಿಂಗ್ (ಮಣ್ಣು ಮತ್ತು ಮರಳಿನಲ್ಲಿ ಚಿತ್ರ ಬಿಡಿಸುವ ಸ್ಪರ್ದೆ) ಚಿತ್ರಕಲೆ, ರಂಗೋಲಿ ಸ್ಪರ್ಧೆ, ಸಾಮೂಹಿಕ ನೃತ್ಯಗಳು ,ಪ್ರೌಢಶಾಲಾ ಮಕ್ಕಳಿಗೆ ಕಲೋತ್ಸವ ಕಾರ್ಯಕ್ರಮಗಳನ್ನು ನಡೆಸಲಾಯಿತು .

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಎ.ಸಿ ಮಂಜಪ್ಪ, ಶಿಕ್ಷಕರ ಸಂಘದ ತಾಲೂಕು ಉಪಾಧ್ಯಕ್ಷ ಬಂದಮ್ಮ, ಶಿಕ್ಷಕರ ಸಂಘದ ಸಂಚಾಲಕಿ ಅರ್ಜುಮುನ್ನೀಸ, ಆರಕನಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಶಾಹಿನಾ ಭಾಷಾ ಸಾಹೇಬ್ ಗುರುಪ್ರಸಾದ್ ಸ್ವಾಮಿ ಮುಖ್ಯ ಶಿಕ್ಷಕ ದಾದಾ ಕಲಂದರ್ , ಹಾಲೇಶ್ ನಾಯ್ಕ್ ಮುಖ್ಯ ಶಿಕ್ಷಕ ಚನ್ನಹಳ್ಳಿ ತಾಂಡ,ನಾಗರಾಜ್ ಕೆ ಗೌರಿಹಳ್ಳಿ ಸಿಆರ್ ಪಿ, ಬಿ ಆರ್ ಪಿ ಸಂದೀಪ್ , ಮುಂತಾದವರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *