ಬಳ್ಳಾರಿಗೆ ಆಗಮಿಸಿದ್ದ ಸಿದ್ದರಾಮಯ್ಯನವರಿಗೆ ಭರ್ಜರಿ ಸ್ವಾಗತ
1 min read
ಬಳ್ಳಾರಿಗೆ ಆಗಮಿಸಿದ್ದ ಸಿದ್ದರಾಮಯ್ಯನವರಿಗೆ ಭರ್ಜರಿ ಸ್ವಾಗತ
ಬಳ್ಳಾರಿ/ವಿಜಯನಗರ: ಅ-11,ಭಾರತ್ ಜೋಡೋ ಪಾದಯಾತ್ರೆ ಸಮಾರಂಭದ ಪೂರ್ವಭಾವಿ ಸಭೆಗೆ ಬಳ್ಳಾರಿಗೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರವರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗಜ ಗಾತ್ರದ ಹೂವಿನ ಹಾರ ಹಾಕುವ ಮೂಲಕ ಭರ್ಜರಿ ಸ್ವಾಗತವನ್ನು ಕೋರಿದರು.
ಈ ವೇಳೆ ಬಳ್ಳಾರಿ, ವಿಜಯನಗರ ಜಿಲ್ಲೆಯ ವಿವಿಧ ತಾಲೂಕುಗಳಿಂದ ಬಾರಿ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಆಗಮಿಸಿದ್ದರು ಬಳ್ಳಾರಿಯಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಪ್ರಿಯಾಂಕ ಗಾಂಧಿ ಭಾಗವಹಿಸುವ ಮೂಲಕ ಪಾದಯಾತ್ರೆಗೆ ಶಕ್ತಿ ತುಂಬಲಿದ್ದಾರೆ
ಎನ್ನಲಾಗುತ್ತದೆ ಆದುದರಿಂದ ಕಾಂಗ್ರೆಸ್ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆಯು ಕರ್ನಾಟಕದಲ್ಲಿಯೇ ಬಳ್ಳಾರಿ ಜಿಲ್ಲೆಯಲ್ಲಿ ನೆಡೆಯುವ ಕಾರ್ಯಕ್ರಮ ವಿಶೇಷವಾಗಲಿದೆ ಎಂದು ಹೇಳಲಾಗುತ್ತದೆ .