Vijayanagara Express

Kannada News Portal

ಕಂಚಿಕೇರಿಯಲ್ಲಿ ಕಾಂಗ್ರೆಸ್ ಕಚೇರಿ ತೆರೆಯಲು ಮುಖಂಡರ ತೀರ್ಮಾನ

1 min read

 

ಕಂಚಿಕೇರಿಯಲ್ಲಿ ಕಾಂಗ್ರೆಸ್ ಕಚೇರಿ ತೆರೆಯಲು ಮುಖಂಡರ ತೀರ್ಮಾನ

 

ಹರಪನಹಳ್ಳಿ: ತಾಲೂಕಿನ ಕಂಚಿಕೇರಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ತೆರೆಯಲು ಪಕ್ಷದ ಕಾರ್ಯಕರ್ತರು ತೀರ್ಮಾನ ಕೈಗೊಂಡಿದ್ದಾರೆ ಎಂದು ಗ್ರಾಮದ ಕಾಂಗ್ರೆಸ್ ಮುಖಂಡರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟಿಸಲು ಮತ್ತು ಪಕ್ಷದ ಚಟುವಟಿಕೆಗಳನ್ನು ಎಲ್ಲಾ ಕಾರ್ಯಕರ್ತರಿಗೂ ತಿಳಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪಕ್ಷದ ಕಚೇರಿಯನ್ನು ತೆರೆಯಲಾಗುತ್ತಿದೆ ತಾಲೂಕಿನಲ್ಲೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಕ್ಷದ ಕಚೇರಿ ತೆರೆಯುತ್ತಿರುವುದು ಇದೇ ಪ್ರಥಮವಾಗಿದೆ.

ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜಿಲ್ಲಾ ಮಟ್ಟದ ಮುಖಂಡರು, ತಾಲೂಕು ಮಟ್ಟದ ಮುಖಂಡರು, ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳನ್ನು ಆಹ್ವಾನಿಸಿ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಉದ್ಘಾಟನೆ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ
ಕಚೇರಿಯನ್ನು ಬೆಂಡಿಗೇರಿ ಹರಪನಹಳ್ಳಿ ರಸ್ತೆಯ ಪಕ್ಕದಲ್ಲಿರುವ ಶಾನುಭೋಗರ ಜಾತಪ್ಪನವರ ಕಣದ ನಿವಾಸದಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಈ ಸಂದರ್ಭದಲ್ಲಿ ಮುಖಂಡರಾದ ಶಾನುಭೋಗರ ಜಾತಪ್ಪ, ಪಾಟೀಲ್ ಕೆಂಚನಗೌಡ , ಕೆ.ಸಿ.ಮಲ್ಲಿಕಾರ್ಜುನ,ಭೀಮಣ್ಣ, ರವಿಶಂಕರ್,ಈಡಿಗರ ವೆಂಕಟೇಶ್, ಬಿ.ಅಂಜಿನಪ್ಪ, ಎಂ ಮಂಜುನಾಥ್,ಸಿದ್ದಪ್ಪ, ಮಹಾಂತೇಶ್, ಕೆಂಚಪ್ಪ,ದಾನಮ್ಮನವರ ಶಿವಕುಮಾರ್, ಅಶೋಕ ಜಿ, ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *