ನಾನಾಯಕಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿರಿ – ಎಂ ಪಿ ಲತಾ ಮಲ್ಲಿಕಾರ್ಜುನ ಮನವಿ
1 min readನಾನಾಯಕಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿರಿ – ಎಂ ಪಿ ಲತಾ ಮಲ್ಲಿಕಾರ್ಜುನ ಮನವಿ
ಬೆಂಗಳೂರು : ಜ – 15 , ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ನಾನಾಯಕಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿರಿ ಎಂ ಪಿ ಲತಾ ಮಲ್ಲಿಕಾರ್ಜುನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಜನವರಿ 16 ರಂದು ಬೆಳಿಗ್ಗೆ 11 ಗಂಟೆಗೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಮಹಿಳಾ ಕಾಂಗ್ರೆಸ್ ಸಮಾವೇಶ ನಾ ನಾಯಕಿ ಸಮಾವೇಶಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕಾಂಗ್ರೆಸ್ ನ ಕಾರ್ಯಕರ್ತರು , ತಾಲೂಕು ಮಟ್ಟದ ಜಿಲ್ಲಾ ಮಟ್ಟದ ಪದಾಧಿಕಾರಿಗಳು, ಸಂಯೋಜಕರು ಮಹಿಳಾ ಮುಖಂಡರು, ಪದಾಧಿಕಾರಿಗಳು ಸಮಾವೇಶಕ್ಕೆ ಬಂದು ಯಶಸ್ವಿಗೊಳಿಸಬೇಕು ಆ ಮೂಲಕ ನಮ್ಮ ಪಕ್ಷದ ಅಧಿನಾಯಕಿ, ಯುವ ನಾಯಕಿ ಯಾದ ಶ್ರೀಮತಿ ಪ್ರಿಯಾಂಕ ಗಾಂಧಿಯವರ ಕೈ ಬಲಪಡಿಸಬೇಕು ಆ ಮೂಲಕ ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಗೊಳಿಸಬೇಕು ಈ ಉದ್ದೇಶದಿಂದ ಈ ಸಮಾವೇಶದಲ್ಲಿ ಹೆಚ್ಚಿನ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕು,
ಈ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಟಿಕೆಟ್ ಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ನೀಡಬೇಕು ಎಂದು ಪ್ರಿಯಾಂಕ ಗಾಂಧಿಯವರಿಗೆ ಮನವಿ ಮಾಡಿಕೊಳ್ಳಬೇಕು. ಈಗಾಗಲೇ ಕಾಂಗ್ರೆಸ್ ನಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಅರ್ಜಿಗಳನ್ನ ಸಲ್ಲಿಸಿದ್ದು ಆ ಅರ್ಜಿಗಳ ಪೈಕಿ 109 ಅರ್ಜಿಗಳು ಮಹಿಳಾ ಅಭ್ಯರ್ಥಿಗಳಿಂದ ಬಂದಿರುತ್ತವೆ ಅವರೆಲ್ಲರೂ ಸಮರ್ಥರಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಟಿಕೆಟ್ ಅನ್ನು ನೀಡುವಂತೆ ವರಿಷ್ಠರ ಗಮನಕ್ಕೆ ತರುವುದು ,ಉತ್ತರ ಪ್ರದೇಶದ ಮಾದರಿಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದಂತೆ ಕರ್ನಾಟಕದಲ್ಲಿಯೂ ಸಹ ಟಿಕೆಟ್ ನೀಡುವಂತೆ ಮನವಿಯನ್ನು ಮಾಡಲು, ಆ ಮೂಲಕ ಮಹಿಳೆಯರ ಶಕ್ತಿಯನ್ನು ರಾಜ್ಯದಲ್ಲಿ ಹೆಚ್ಚಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪದಾಧಿಕಾರಿಗಳು ಮುಖಂಡರು ಕಾರ್ಯಕರ್ತರು ಈ ಸಮಾವೇಶದಲ್ಲಿ ಪಾಲ್ಗೊಳ್ಳಬೇಕೆಂದು ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರಿಗೆ ಎಂ ಪಿ ಲತಾ ಮಲ್ಲಿಕಾರ್ಜುನ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಕೆಪಿಸಿಸಿ ಇವರು ಮನವಿ ಮಾಡಿಕೊಂಡಿದ್ದಾರೆ