Vijayanagara Express

Kannada News Portal

ನಾನಾಯಕಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ

1 min read

ನಾನಾಯಕಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ

ಹರಪನಹಳ್ಳಿ: ಜ – 15 , ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 16 ರಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ನಡೆಯುವ ನಾನಾಯಕಿ ಮಹಿಳಾ ಕಾಂಗ್ರೆಸ್ ಸಮಾವೇಶಕ್ಕೆ ತಾಲೂಕಿನ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ,ಹರಪನಹಳ್ಳಿ ಮಹಿಳಾ ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷೆ ಪಿ ಜಯಲಕ್ಷ್ಮಿ ಮತ್ತು ಚಿಗ ಟೆರಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಭಾಗ್ಯಮ್ಮ ಮಲ್ಲಿಕಾರ್ಜುನ್ ಮನವಿ ಮಾಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪಕ್ಷದ ಯುವ ನಾಯಕಿ ಶ್ರೀಮತಿ ಪ್ರಿಯಾಂಕ ಗಾಂಧಿಯವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡಲಿದ್ದಾರೆ ಆದುದರಿಂದ ಈ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.

 

Leave a Reply

Your email address will not be published. Required fields are marked *