Vijayanagara Express

Kannada News Portal

ಶಾಸಕ ಗಾಲಿ ಕರುಣಾಕರ ರೆಡ್ಡಿಯವರು ಕುಟುಂಬದ ಜೊತೆಗೆ ಮತಚಲಾಯಿಸಿದರು

1 min read

ಶಾಸಕ ಗಾಲಿ ಕರುಣಾಕರ ರೆಡ್ಡಿಯವರು ಕುಟುಂಬದ ಜೊತೆಗೆ ಮತಚಲಾಯಿಸಿದರು

ಹರಪನಹಳ್ಳಿ: ಮೇ – 10 ,ಹರಪನಹಳ್ಳಿ ವಿಧಾನ ಸಭಾ ಕ್ಷೇತ್ರದ (104)ವ್ಯಾಪ್ತಿಯ ಪಟ್ಟಣದ 5ನೇ ವಾರ್ಡ್ ಆಶ್ರಯ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬೂತ್ ನಲ್ಲಿ ಬಿಜೆಪಿ ಅಭ್ಯರ್ಥಿ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಜಿ ಕರುಣಾಕರರೆಡ್ಡಿ ಕುಟುಂಬ ಸದಸ್ಯರೊಂದಿಗೆ ಮೊದಲ ಬಾರಿಗೆ ಮತ ಚಲಾಯಿಸಿದರು ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹರಪನಹಳ್ಳಿ ಕ್ಷೇತ್ರದ ಮತದಾರರು ಕಳೆದ ಇಪ್ಪತ್ತು ವರ್ಷಗಳಿಂದ ನನಗೆ ಆಶಿರ್ವಾದ ಮಾಡಿದ್ದಾರೆ ಈ ಬಾರಿ ಕೂಡ ನನಗೆ ಮತ ನೀಡುವುದರ ಮೂಲಕ ಆಶಿರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಈ ತಾಲೂಕಿನಲ್ಲಿ ನಾನು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ನೋಡಿ ಕ್ಷೇತ್ರದ ಜನರು ಮತ್ತೊಮ್ಮೆ ನನ್ನನ್ನು ಹಾರಿಸುತ್ತಾರೆ ಎನ್ನುವ ನಂಬಿಕೆ ಇದೆ. ಹಾಗೂ ದೇಶದೆಲ್ಲೆಡೆ ಬಿಜೆ ಪಿ ಯಪರವಾದ ಗಾಳಿಬೀಸುತಿದ್ದು ಅದರಿಂದ ಕರ್ನಾಟಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಅಸ್ತಿತ್ವ ಉಳಿಸಿಕೊಳ್ಳುವುದು ಎಂಬ ಭರವಸೆ ನಮಗಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *