ಸಂವಿಧಾನ ಓದುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಟಿಎಸ್ ಡಬ್ಲೂ ರೇಣುಕಾದೇವಿ ಮನವಿ
1 min readಸಂವಿಧಾನ ಓದುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಟಿಎಸ್ ಡಬ್ಲೂ ರೇಣುಕಾದೇವಿ ಮನವಿ
ಹರಪನಹಳ್ಳಿ:ಸೆ-12 , ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯನ್ನು ಸೆ.15 ರಂದು ಆಚರಿಸುವ ನಿಮಿತ್ತ ಅಂದು ಪಟ್ಟಣದ ತಾಲೂಕು ಕ್ರೀಡಾಂಗಣದ ಬಳಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಂವಿಧಾನದ ಪ್ರಸ್ತಾವನೆ(ಪಿಠೀಕೆ) ಓದುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಾಲೂಕು ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕಿ ರೇಣುಕಾದೇವಿ ತಿಳಿಸಿದರು.
ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ ನಿರ್ದೇಶನ ಹಾಗೂ ಜಿಲ್ಲಾಡಳಿತ ಸೂಚನೆಯಂತೆ ಅಂದು ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 9.30 ಕ್ಕೆ ಸಂವಿಧಾನ ಪಿಠೀಕೆ ಓದುವ ಕಾರ್ಯಕ್ರಮ ಆಯೋಜಿಸಿದ್ದು, ಎಲ್ಲಾ ಸಿದ್ದತೆಗಳನ್ನು ಕೈಗೊಂಡಿದ್ದು ಅಂದಿನ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು, ವಸತಿ ನಿಲಯದ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ರವರು ಸಂವಿಧಾನದ ಪೀಠಿಕೆ (ಪ್ರಸ್ತಾವನೆ)ಯನ್ನು ಓದುವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಿದ್ದಾರೆ ಹಾಗೂ ಉಪವಿಭಾಗಾಧಿಕಾರಿ ಟಿ.ವಿ.ಪ್ರಕಾಶ್ , ತಹಶೀಲ್ದಾರ್ ಗಿರೀಶ್ ಬಾಬು ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು ಆದುದರಿಂದ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂವಿಧಾನದ ಪ್ರಸ್ತಾವನೆ(ಪಿಠೀಕೆ) ಓದುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿಮಾಡಿದ್ದಾರೆ.
ಈ ಸಂದರ್ಭದಲ್ಲಿ ನಿಲಯ ಮೇಲ್ವಿಚಾರಕರಾದ ಎನ್.ಜಿ.ಬಸವರಾಜ, ರಘು , ಸಿಬ್ಬಂದಿಗಳಾದ ಪರಶುರಾಮ, ಯಾಸ್ಮಿನ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು .