October 11, 2024

Vijayanagara Express

Kannada News Portal

ಗಡ್ಡಕ್ಕೆ ಬೆಂಕಿ ಹತ್ತಿದಾಗ  ಬಾವಿ ತೊಡಿದಂತೆ ಮಾಡಬೇಡಿ ಪಿಡಿಒಗಳಿಗೆ ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ್ ತಾಕೀತು

1 min read

ಗಡ್ಡಕ್ಕೆ ಬೆಂಕಿ ಹತ್ತಿದಾಗ  ಬಾವಿ ತೊಡಿದಂತೆ ಮಾಡಬೇಡಿ ಪಿಡಿಒಗಳಿಗೆ ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ್ ತಾಕೀತು

 

ಹರಪನಹಳ್ಳಿ: ಜ – 2 , ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆ ತಾಲೂಕಿನಾದ್ಯಾಂತ ಯಾವ ಗ್ರಾಮಗಳಲ್ಲಿಯೂ ಸಹ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತವಾಗಿ ಕ್ರಮವಹಿಸುವ ಮೂಲಕ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಬೇಕು  ಅದನ್ನು ಬಿಟ್ಟು ಈಗ ನಿರ್ಲಕ್ಷ್ಯ  ತೋರಿ ನೀರಿನ ಅಭಾವವಾದಗ   ಪರದಾಡಬಾರದು  ಎಂದು ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ್ ಹೇಳಿದರು .

ಪಟ್ಟಣದ ತಾಲೂಕು ಪಂಚಾಯಿತಿ ಆವರಣದ ರಾಜೀವ್ ಗಾಂಧಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿಯೊಂದು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ 15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಕುಡಿಯುವ ನೀರಿಗಾಗಿ ಮೀಸಿಲಿಟ್ಟಿರುವ ಹಣದ ಮಾಹಿತಿಯನ್ನು ಪಡೆದು ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಯಾವ ರೀತಿಯ ತೊಂದರೆಯೂ ಆಗದಂತೆ ಕ್ರಮ ಕೈಗೊಳ್ಳಬೇಕು ಅಲ್ಲದೆ ಪ್ರತಿಯೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿಗಾಗಿ ಖಾಸಗಿ ವ್ಯಕ್ತಿಗಳ ಜೊತೆ ಒಡಂಬಡಿಕೆ ಅಥವಾ ಒಪ್ಪಂದ ಮಾಡಿಕೊಂಡು ಅದರ ಖಾಯಂಗೊಳಿಸಿ ಕುಡಿಯುವ ನೀರಿಗಾಗಿ ಸೂಕ್ತವಾದ ಕ್ರಮಗಳನ್ನು ಕೈಗೊಳ್ಳಬೇಕು .

ಕೆಲವು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು ನಿಮ್ಮ ಮೇಲೆ ಅನೇಕ ದೂರುಗಳು ಬರುತ್ತವೆ ಅವುಗಳನ್ನು ಪರಿಹರಿಸಿ ಶಾಸಕರ ದೂರವಾಣಿ ಕರೆಗಳನ್ನು ಸ್ವೀಕರಿಸಿ ಮಾತನಾಡಿ , ಜನರು ಕುಡಿಯಲು ನೀರಿಲ್ಲ ಎಂದು ನಮ್ಮ ಬಳಿ ಬಂದರೆ ನಿಮ್ಮ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳು ನನಗೆ ಕೊಡಿ ಜನರನ್ನು ನೇರವಾಗಿ ನಿಮ್ಮ ಬಳಿಯೇ ಕಳಿಸುತ್ತೇನೆ ಎಂದ ಅವರು ಲಕ್ಷ್ಮಿಪುರ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಅವರು ರಾಜ್ಯದಲ್ಲಿ ಅತ್ಯುತ್ತಮ ಪಂಚಾಯಿತಿ ಎಂದು ಅವಾರ್ಡ್ ಪಡೆದಿರುವ ತಮ್ಮ ಪಂಚಾಯ್ತಿ ಅದರ ಕೆಲಸದಲ್ಲಿಯೂ ಅದನ್ನು ಸಾಬೀತುಪಡಿಸಿ ತೋರಿಸಿ ಎಂದರು .

ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಕುಂದುಕೊರತೆಗಳಾಗದಂತೆ ಪ್ರತಿಯೊಬ್ಬ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಮಳೆಗಾಲ ಬರುವವರೆಗೂ ಎಚ್ಚರದಿಂದ ಕಾರ್ಯನಿರ್ವಹಿಸಿ ಎಂದರು .

ತಾಲೂಕು ಆರೋಗ್ಯ ಅಧಿಕಾರಿ ಹಾಗೂ ಹರಪನಹಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಗಳನ್ನು ಮಾತನಾಡಿಸಿದ ಅವರು ಆಸ್ಪತ್ರೆಯಲ್ಲಿ ವೈದ್ಯರು ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂದು ಜನರು ದೂರುತ್ತಿದ್ದಾರೆ ಅಲ್ಲದೆ ದಾದಿಯರು ಸಹ ಸರಿಯಾಗಿ ಚಿಕಿತ್ಸೆಯನ್ನು ನೀಡುತ್ತಿಲ್ಲ ಎಂಬ ದೂರುಗಳು ಬರುತ್ತಿವೆ ಇವರ ಬಗ್ಗೆ ಕ್ರಮವನ್ನು ಕೈಗೊಳ್ಳಿ ,ಬಯೋಮೆಟ್ರಿಕ್ ವ್ಯವಸ್ಥೆಯನ್ನು ಖಡ್ಡಾಯಗೊಳಿಸಿರಿ ಎಂದರು .
ತಾಲೂಕಿನಲ್ಲಿ ಏಳು ಕೋವಿಡ್ ಪ್ರಕರಣಗಳು ಇವೆ ಎಂಬುದನ್ನು ವೈದ್ಯಾಧಿಕಾರಿಗಳಿಂದ ತಿಳಿದುಕೊಂಡ ಅವರು ಕೋವಿಡ್ ನ್ನು ಎದುರಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಆಸ್ಪತ್ರೆಯಲ್ಲಿ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು ಅಲ್ಲದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ವಿಜಯಲಕ್ಷ್ಮಿ ಅತ್ತಿಕಾಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ಅಧಿಕಾರಿ ರೇಣುಕಾದೇವಿ ಇವರಿಗೆ ವಿದ್ಯಾರ್ಥಿನಿಲಯಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಿ ಕೋವಿಡ್ ನ ನಿಯಮಗಳನ್ನು ಖಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದರು .

ವಲಯ ಅರಣ್ಯ ಅಧಿಕಾರಿ ಮಲ್ಲಪ್ಪ ರವರಿಗೆ ಬೇಸಿಗೆ ಸಮಯದಲ್ಲಿ ಅರಣ್ಯದಲ್ಲಿ ಕಾಳ್ಗಿಚ್ಚು ಹರಡದಂತೆ ಮುಂಜಾಗ್ರತವಹಿಸಿ ಎಂದರು .

ತಹಸಿಲ್ದಾರ್ ಗಿರೀಶ್ ಬಾಬು ಮಾತನಾಡಿ ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರನ್ನು ವಿತರಿಸುತ್ತಿರುವವರು ತಾಲೂಕು ಆಡಳಿತದ ಗಮನಕ್ಕೆ ಖಡ್ಡಾಯವಾಗಿ ತರಬೇಕು ಎಂದು ತಿಳಿಸಿದರು ಅಲ್ಲದೇ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ನೀರನ್ನು ಪೂರೈಸಲು ವಿತರಕರನ್ನು ಟೆಂಡರ್ ಮಾಡಲಾಗುವುದು ಎಂದು ತಿಳಿಸಿದರು .

ಈ ಸಂದರ್ಭದಲ್ಲಿ ಪುರಸಭೆ ಮುಖ್ಯ ಅಧಿಕಾರಿ ಎರಗುಡಿ ಶಿವಕುಮಾರ್ ,ತಾಲೂಕು ವೈದ್ಯಾಧಿಕಾರಿ ಡಾ. ಹಾಲಸ್ವಾಮಿ, ಡಾ. ಶಂಕರ್ ನಾಯಕ್ ,ಕುಡಿಯುವ ನೀರಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಿರಣ್ ಕುಮಾರ್ ತೋಟಗಾರಿಕಾ ಇಲಾಖೆ ಅಧಿಕಾರಿ ಜಯಸಿಂಹ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *