ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳನ್ನು ಅನುಸರಿಸಬೇಕು – ಶಾಂತಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ
1 min read
ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳನ್ನು ಅನುಸರಿಸಬೇಕು – ಶಾಂತಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ
ಹರಪನಹಳ್ಳಿ:ಇಂದಿನ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳನ್ನು ಮಾದರಿಯಾಗಿಟ್ಟುಕೊಂಡು ಹೆಚ್ಚಿನ ವಿದ್ಯಾಬ್ಯಾಸ ಪಡೆದು ಉನ್ನತ ಹುದ್ದೆಯನ್ನು ಪಡೆಯಲು ಪ್ರತಿಭಾ ಪುರಸ್ಕಾರ ಸಹಕಾರಿಯಾಗಲಿದೆ ಎಂದು ಅರಸಿಕೇರಿ ಕೋಲಶಾಂತೇಶ್ವರ ಮಠದ ಶಾಂತಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಪಟ್ಟಣಕ್ಕೆ ಹೊಂದಿಕೊಂಡಿರುವ ದೇವರ ತಿಮ್ಲಾಪುರ
ಗ್ರಾಮದಲ್ಲಿ ಭಾನುವಾರ ತರುಣ್ ಎಜುಕೇಷನಲ್ ಅಂಡ್ ರಿಸರ್ಚ ಅಸೋಸಿಯೇಷನ್ ಮತ್ತು ಬಸವ ಸೈನ್ಯ ಅವರ ಸಂಯುಕ್ತಾಶ್ರಯದಲ್ಲಿ ಜರುಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು.
ಮಕ್ಕಳು ಅಂಕಗಳನ್ನು ಗಳಿಸುವುದು ಮಾತ್ರವಲ್ಲ, ಸಮಾಜದಲ್ಲಿನ ಸಂಸ್ಕಾರ, ಮಾನವೀಯತೆ, ಗೌರವಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಹಡಗಲಿ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಎ.ವೀರಣ್ಣ, ಡಾ.ಜಯಣ್ಣ ಕಂಚಿಕೇರಿ ಮಾತನಾಡಿದರು.
ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.